ಕೋಟ: ಮಗುವಿಗೆ ಎದೆಹಾಲು ಕುಡಿಸುತ್ತಿದ್ದಾಗ ತಾಯಿ ಕುಸಿದು ಬಿದ್ದು ಮೃತ್ಯು

ಕೋಟ, ಫೆ.19: ಮಗುವಿಗೆ ಎದೆಹಾಲು ಕುಡಿಸುತ್ತಿದ್ದ ತಾಯಿ ಕುಸಿದು ಬಿದ್ದು ಮೃತಪಟ್ಟ ಫೆ.18ರಂದು ಬೆಳಗ್ಗೆ ನಡೆದಿದೆ.

ಗುಣವತಿ(39) ಮೃತ ಮಹಿಳೆ. ಡಿ.23ರಂದು ಉಡುಪಿಯ ತಾಯಿ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿ ಗಂಡು ಮಗುವಿನ ಜನನ ನೀಡಿದ್ದ ಗುಣವತಿ, 21 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಬಂದಿದ್ದರು.ಸುಮಾರು ಒಂದು ವಾರದ ಹಿಂದೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದ್ದ ಇವರು, ಮಗುವಿಗೆ ಹಾಲು ಕುಡಿಸುತ್ತಿರುವಾಗ ನಿತ್ರಾಣಗೊಂಡು ಕುಸಿದು ಬಿದ್ದರೆನ್ನಲಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡ ಇವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories