ಕೋಟ: ಮನೆ ಕಳವು ಪ್ರಕರಣದ ಆರೋಪಿಗಳ ಬಂಧನ -15ಲಕ್ಷರೂ ಮೌಲ್ಯದ ಚಿನ್ನಾಭರಣ, 3 ವಾಹನಗಳು ವಶ


ಬ್ರಹ್ಮಾವರವೃತ್ತದ ಕೋಟಠಾಣಾವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ 2022 ಸಾಲಿನ ಸೆಪ್ಟಂಬರ್ ತಿಂಗಳಿನಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

IMG 20230123 WA0049 Featured Story, Udupi


ಈ ಬಗ್ಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ ಎಂ. ಹೆಚ್ ಐ.ಪಿ.ಎಸ್ ರವರ ಆದೇಶದಂತೆ ಶ್ರೀಅನಂತಪದ್ಮನಾಭ, ಸಿ.ಪಿ.ಐ ಬ್ರಹ್ಮಾವರರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು ಸದ್ರಿ ತಂಡದಲ್ಲಿನಕೋಟ ಠಾಣಾ ಪಿ.ಎಸ್.ಐ ಶ್ರೀ ಮಧು ಬಿ.ಈ, ಪ್ರೋಬೇಷನರಿ ಪಿ.ಎಸ್.ಐ ಶ್ರೀ ನೂತನ್ ಡಿ.ಈ,ಕೋಟಸಿಬ್ಬಂದಿಯವರಾದಪ್ರದೀಪ ನಾಯಕ್, ರಾಘವೇಂದ್ರ, ಪ್ರಸನ್ನ ಬ್ರಹ್ಮಾವರ ಠಾಣಾ ಸಿಬ್ಬಂದಿ ವೆಂಕಟರಮಣ ದೇವಾಡಿಗ,ರವರ ತಂಡವು ಹಳೆಯ ರಾತ್ರಿ ಮನೆಕಳ್ಳತನ ಪ್ರಕರಣದ ಆರೋಪಿಗಳು, ಜೈಲಿನಿಂದ ಬಿಡುಗಡೆಯಾದವರ ಮಾಹಿತಿಯನ್ನು ಕಲೆಹಾಕಿ ಅವರ ಚಲನವಲನ ಮೇಲೆ ನಿಗಾ ಇರಿಸಿ,ತಾಂತ್ರಿಕ ಮಾಹಿತಿ ಹಾಗೂ ಸಿಸಿ ಕ್ಯಾಮೇರಾ ಪರಿಶೀಲನೆ ನಡೆಸಿ ಸಂಶಯಾಸ್ಪದ ಆರೋಪಿಗಳ ಮೇಲೆ ನಿಗಾವಹಿಸಿರುತ್ತಾರೆ.

IMG 20230123 WA0048 Featured Story, Udupi


ದಿನಾಂಕ22-01-2023ರಂದು ಕೋಟ ಠಾಣಾ ಸರಹದ್ದಿನ ಸಾಯಬರಕಟ್ಟೆ ಬಳಿ ಖಚಿತ ಮಾಹಿತಿಯಂತೆ ವಿಶೇಷ ತಂಡವು ಆರೋಪಿ ಪತ್ತೆಯ ಬಗ್ಗೆ ವಾಹನ ತಪಾಸಣೆ ನಡೆಸುವ ಸಮಯದಲ್ಲಿ ಬಂದ ಪೋರ್ಡ್‌ ಮಾಂಡಿಯೋ ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ರಾಜೇಶ ದೇವಾಡಿಗ ಮತ್ತು ಮೊಹಮ್ಮದ್‌‌‌‌ ರಿಯಾಜ್‌‌‌‌‌‌‌ ಹೊಸ್ಮಾರ್‌‌‌‌ @ ರಿಯಾಜ್‌‌‌‌‌‌ ಎಂಬುವವರಿದ್ದು ಕಾರನ್ನು ಪರಿಶೀಲನೆ ನಡೆಸಿದಾಗ ಅವರ ಬಳಿ ಯಾವುದೇ ದಾಖಲೆಯಿಲ್ಲದ ಚಿನ್ನಾಭರಣಗಳು ಇರುವುದು ಕಂಡುಬಂದಿರುತ್ತದೆ.ಈ ಬಗ್ಗೆ ವಿಚಾರಿಸಿದಾಗ2022 ನೇ ಸಾಲಿನ ಸೆಪ್ಟಂಬರ್‌‌‌‌‌‌‌‌ ತಿಂಗಳಲ್ಲಿ ಸಾಸ್ತಾನದ ಚರ್ಚ್‌ ಬಳಿ ಒಂದು ಮನೆಯಿಂದ ಕಳವು ಮಾಡಿದ ಚಿನ್ನಾಭರಣಗಳಾಗಿರುವುದಾಗಿ ಅವುಗಳನ್ನು ಮಾರಾಟ ಮಾಡಲು ಶಿವಮೊಗ್ಗ ಕಡೆಗೆ ಹೋಗುತ್ತಿರುವುದಾಗಿ ಒಪ್ಪಿಕೊಂಡಿರುತ್ತಾರೆ.

  1. ರಾಜೇಶ್‌‌‌‌‌ ದೇವಾಡಿಗ, ಪ್ರಾಯ 38 ವರ್ಷ, ತಂದೆ ದಿ: ಬಾಲಕೃಷ್ಣ ದೇವಾಡಿಗ, ವಾಸ: 2-22 ಎ, ಮಂಜರಬೆಟ್ಟು, ಎಲ್ಲೂರು ಗ್ರಾಮ, ಕಾಪು ತಾಲೂಕು ಈತನು ಹಳೆಯ ಕಳ್ಳತನದ ಆರೋಪಿಯಾಗಿದ್ದು ಜೈಲುವಾಸ ಅನುಭವಿಸಿ ಬಿಡುಗಡೆಗೊಂಡಿರುತ್ತಾನೆ. ಈಗಾಗಲೇ ಈತನ ಮೇಲೆ ಉಡುಪಿಜಿಲ್ಲೆಯಲ್ಲಿ ಒಟ್ಟು 12 ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಈತನು ಕಾಪು ಪೊಲೀಸ್ಠಾಣೆಯಲ್ಲಿ 2 ಪ್ರಕರಣ, ಕಾರ್ಕಳ ಗ್ರಾಮಾಂತರ ಪೊಲೀಸ್ಠಾಣೆಯಲ್ಲಿ 1 ಪ್ರಕರಣ, ಪಡುಬಿದ್ರೆಪೊಲೀಸ್ಠಾಣೆಯಲ್ಲಿ 3 ಪ್ರಕರಣ, ಶಿರ್ವಪೊಲೀಸ್ಠಾಣೆಯಲ್ಲಿ 2 ಪ್ರಕರಣ, ಉಡುಪಿ ನಗರ ಪೊಲೀಸ್ಠಾಣೆಯಲ್ಲಿ 4 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ.
    2.ಮೊಹಮ್ಮದ್‌‌‌‌ ರಿಯಾಜ್‌‌‌‌‌‌‌ ಹೊಸ್ಮಾರ್‌‌‌‌ @ ರಿಯಾಜ್‌‌‌‌‌‌,ಪ್ರಾಯ 39 ವರ್ಷ, ತಂದೆ ಹಸನಬ್ಬ, ವಾಸ: ರಿಯಾನ ಮಂಜಿಲ್‌‌‌‌, ಹೊಸ್ಮಾರು, ಈದು ಗ್ರಾಮ, ಕಾರ್ಕಳ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಈತನು ಮೇಲೆ 2018 ರಲ್ಲಿ ಕಾರ್ಕಳದ ಪ್ಲೋರಿನ್ ಮಚಾದೋ ರವರ ಕೊಲೆ ಹಾಗೂ ಸುಲಿಗೆ ಪ್ರಕರಣ ಹಾಗೂ 2021 ರಲ್ಲಿ ಕಾಸರಗೊಡು ಜಿಲ್ಲೆಯಲ್ಲಿ ನಡೆದ ಪ್ರಮುಖ ಪ್ರಕರಣವಾದ ಮಂಜೇಶ್ವರದ ರಾಜಧಾನಿ ಜ್ಯುವೆಲರ್ಸ್‌ ದರೋಡೆ ಪ್ರಕರಣದ ಆರೋಪಿಯಾಗಿರುತ್ತಾನೆ.
    ಈ ಇಬ್ಬರು ಆರೋಪಿಗಳು ಹಿರಿಯಡ್ಕ ಜೈಲಿನಲ್ಲಿರುವಾಗ ಪರಿಚಯವಾಗಿದ್ದು ರಾತ್ರಿ ಮನೆ ಕಳ್ಳತನ ನಡೆಸಲು ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾತ್ರಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ನಡೆಸಲು ಸಂಚು ನಡೆಸುತ್ತಿದ್ದರು.
    ಈ ಆರೋಪಿಗಳಿಂದ ಕಳ್ಳತನ ನಡೆಸಿದ ಸುಮಾರು 15 ಲಕ್ಷದ ಚಿನ್ನಾಭರಣ, ಕಳ್ಳತನ ಮಾಡಿದ ಹಣದಿಂದ ಖರೀದಿಸಿದ ಸುಮಾರು 2ಲಕ್ಷ 50 ಸಾವಿರ ಮೌಲ್ಯದ ಪೋರ್ಡ್‌ ಮಾಂಡಿಯೋ ಕಾರು, ಸುಮಾರು 1 ಲಕ್ಷ ಮೌಲ್ಯದ ಹಿರೋ ಕಂಪೆನಿಯ ಡೆಸ್ಟೀನಿ ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 50000 ಸಾವಿರ ಮೌಲ್ಯದ ಹೊಂಡಾ ಆ್ಯಕ್ಟೀವ್ ಮೋಟಾರ್ ಸೈಕಲ್ ಆರೋಪಿಗಳಿಂದ ಸ್ವಾಧೀನ ಪಡಿಸಲಾಗಿರುತ್ತದೆ. ಸ್ವಾಧೀನ ಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 19 ಲಕ್ಷ ಆಗಿರುತ್ತದೆ.

  2. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ ಎಂ. ಹೆಚ್ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್.ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ, ಶ್ರೀ ದಿನಕರ ಪಿ,ಕೆಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗ, ಉಡುಪಿ ರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಶ್ರೀ ಅನಂತ ಪದ್ಮನಾಭ, ಸಿ.ಪಿ.ಐ ಬ್ರಹ್ಮಾವರ ವೃತ್ತ, ಕೋಟಠಾಣಾಪಿ.ಎಸ್. ಐಶ್ರೀ ಮಧು ಬಿ.ಈ,ತನಿಖಾ ಪಿ.ಎಸ್.ಐ ಶ್ರೀಮತಿ ಪುಷ್ಪಾ, ಪ್ರೋಬೇಷನರಿ ಪಿ.ಎಸ್.ಐ ಶ್ರೀ ನೂತನ್ ಡಿ.ಈ,ಕೋಟ ಠಾಣಾ ಸಿಬ್ಬಂದಿಯವರಾದ ಎ.ಎಸ್.ಐ ರವಿಕುಮಾರ್, ರಾಘವೇಂದ್ರ, ಪ್ರಸನ್ನ, ಬ್ರಹ್ಮಾವರಠಾಣಾಸಿಬ್ಬಂದಿಗಳಾದವೆಂಕಟರಮಣದೇವಾಡಿಗ, ಸಂತೋಷ ರಾಥೋಡ್, ಬ್ರಹ್ಮಾವರ ವೃತ್ತ ಕಛೇರಿ ಸಿಬ್ಬಂದಿಯವರಾದ ಎ.ಎಸ್.ಐ ಕೃಷ್ಣಪ್ಪ, ಪ್ರದೀಪ ನಾಯಕ್ ಮತ್ತುಜಿಲ್ಲಾಸಿಡಿಆರ್ ವಿಭಾಗದನಿತಿನ್, ದಿನೇಶ್, ಹಾಗೂಚಾಲಕರಾದ ಗೋಪಾಲ ಮತ್ತು ಶೇಖರ ಸೇರುಗಾರ್ ಪ್ರಮುಖ ಪಾತ್ರ ವಹಿಸಿರುತ್ತಾರೆ. ಸದ್ರಿ ಕಾರ್ಯಾಚರಣೆಯಲ್ಲಿ ಕಾಪು ವೃತ್ತದ ಅಧಿಕಾರಿ ಮತ್ತುಸಿಬ್ಬಂದಿಯವರು ಸಹಕರಿಸಿರುತ್ತಾರೆ. ಪ್ರಕರಣವನ್ನು ಭೇದಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ ಎಂ. ಹೆಚ್ ಐ.ಪಿ.ಎಸ್ ರವರು ತಂಡವನ್ನು ಅಭಿನಂದಿಸಿರುತ್ತಾರೆ.

Latest Indian news

Popular Stories