ಕೋವಿಡ್ -19 ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ: ಹತ್ತು ಮಂದಿ ಮೃತ್ಯು

ಮಹಾರಾಷ್ಟ್ರ: ಅಹ್ಮದ್ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಹತ್ತು ಮಂದಿ ಸೋಂಕಿತರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಘಟನೆಯನ್ನು ಖಚಿತಪಡಿಸಿರುವ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿ 17 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 10 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಸತ್ತವರೆಲ್ಲರೂ ಕೋವಿಡ್ -19 ಗೆ ಚಿಕಿತ್ಸೆ ಪಡೆಯುತ್ತಿದ್ದರೆಂದು” ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!