ಹಾವೇರಿ: ಗಡಿ ಭಾಗದಲ್ಲಿ ಶಿಕ್ಷಣ, ಆರೋಗ್ಯ, ಸಂಸ್ಕೃತಿ ಮತ್ತು ಮೂಲ ಸೌಕರ್ಯ ಒದಗಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಗಡಿ ಅಭಿವೃದ್ದಿ ಪ್ರಾಕಾರಕ್ಕೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಗಡಿನಾಡು ಮತ್ತು ಗಡಿಯಾಚೆ ಕನ್ನಡಿಗರ ನೋವು, ಸಮಸ್ಯೆಗಳ ಸಂಪೂರ್ಣ ಅರಿವು ರಾಜ್ಯ ಸರ್ಕಾರಕ್ಕೆ ಇದೆ. ಇವರನ್ನು ನಿರ್ಲಕ್ಷ್ಯಿಸುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಗಡಿಯಾಚೆಯ ಕನ್ನಡಿಗರನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದ್ದು, ಇವರೆಲ್ಲರಿಗೂ ಮಾಸಾಶನ ನೀಡಲಾಗುವುದು ಎಂದರು.
ರಾಜ್ಯದಲ್ಲಿರುವ ಹೊರ ನಾಡ ಅಕಾರಿಗಳು, ಇನ್ನಿತರರು ಕನ್ನಡ ಕಲಿಯಬೇಕಾದುದು ಕಡ್ಡಾಯ. ಇದಕ್ಕಾಗಿ ಇವರೆಲ್ಲರಿಗೂ ನಿರ್ದಿಷ್ಟ ಅವಯಲ್ಲಿ ಸರ್ಕಾರವೇ ತರಬೇತಿ ಮೂಲಕ ಕನ್ನಡ ಕಲಿಸುವ ಅಭಿಯಾನ ಆರಂಭಿಸಲಾಗುವುದು ಎಂದು ಹೇಳಿದರು.
ಕನ್ನಡಕ್ಕಾಗಿ ಹೋರಾಡಿದವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ವಾಧ್ಯಕ್ಷರು ಮನವಿ ಮಾಡಿದ್ದಾರೆ. ಈಗಾಗಲೇ ಹಲವಾರು ಪ್ರಕರಣಗಳನ್ನು ಹಿಂಪಡೆಯಲಾಗಿದ್ದು, ಇನ್ನೂ ಉಳಿದಿದ್ದರೆ ಕಾನೂನಿನ ಅವಕಾಶ ಗಮನಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇದೇ ವೇಳೆ, ಸಮ್ಮೇಳನದ ಆತಿಥ್ಯ ವಹಿಸಿದ್ದ ಹಾವೇರಿ ಸಾಹಿತ್ಯ ಪರಿಷತ್ ಕಟ್ಟಡ ನಿರ್ಮಾಣಕ್ಕಾಗಿ ಮೂರು ಕೋಟಿ ರೂ.ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.