ನೆಲ್ಯಹುದಿಕೇರಿ ಗ್ರಾಮದಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಲ್ಯಹುದಿಕೇರಿ ನಿವಾಸಿ ಆಸಿಬ್, ಮೋಹನ್ ಹಾಗೂ ಎಮ್ಮೆಮಾಡು ಗ್ರಾಮದ ಮಹಮ್ಮದ್ ಆಸೀಫ್ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಸಿದ್ದಾಪುರ ಪೊಲೀಸರು ಹಾಗೂ ಜಿಲ್ಲಾ ಕ್ರೈಮ್ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ ಸುಮಾರು 1 ಕೆ.ಜಿ ಗಾಂಜ ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರಿನೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ದಿಲೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.