ಗುಜರಾತ್’ನಲ್ಲಿ ಸ್ಯಾಂಟ್ರೋ ರವಿಯನ್ನಹ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು – ಗೃಹ ಮಂತ್ರಿ

ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 11 ದಿನಗಳ ನಂತರ ಸ್ಯಾಂಟ್ರೋ ರವಿ ಬಂಧನವಾಗಿದೆ. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಸ್ಯಾಂಟ್ರೋ ರವಿ ಬಂಧನವಾಗಿದೆ

ಗುಜರಾತ್ ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆ ತರುವುದಾಗಿ ಪೊಲೀಸ್ ಮೂಲಗಳು ತಿಳಿಸುವೆ. ಇಂದು ಸಂಜೆ ಅಥವಾ ನಾಳೆ ಆತನನ್ನು ಬೆಂಗಳೂರಿಗೆ ಕರೆದಿರುವ ಸಾಧ್ಯತೆ ಇದೆ. ಎರಡು ಮೂರು ಕಡೆ ಅಂತಿಮ ಕ್ಷಣದಲ್ಲಿ ತಪ್ಪಿಸಿಕೊಂಡಿದ್ದ. ಎಲ್ಲಾ ಆಯಮದಲ್ಲೂ ತನಿಖೆ ನಡೆಯುತ್ತದೆ ಏನೇ ಇದ್ದರೂ ಅಡಗಿಸಿರುವುದಿಲ್ಲ. ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ.

ಆತ ನಡೆಸಿದ ಎಲ್ಲ ಕೃತ್ಯಕ್ಕೆ ಶಿಕ್ಷೆಯಾಗುತ್ತೆ. ಯಾವುದೇ ಅಧಿಕಾರಿ ರಾಜಕಾರಣಿ ಇದ್ದರೂ ಕೂಡ ತನಿಕೆಯಿಂದ ಹೊರಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು. ಸದ್ಯ ರವಿ ಬಂಧನವಾಗಿದೆ ಹೆಚ್ಚಿನ ವಿವರಣೆ ನೀಡಲು ಹೋಗುವುದಿಲ್ಲ ಪೊಲೀಸರು ಈ ಬಗ್ಗೆ ವಿವರ ನೀಡುತ್ತಾರೆ

Latest Indian news

Popular Stories