ಗೇಬ್ರಿಯಲ್ ಚಂಡಮಾರುತಕ್ಕೆ ನ್ಯೂಜಿಲೆಂಡ್ ದೇಶ ತತ್ತರ

ವೆಲ್ಲಿಂಗ್ಟನ್: ಗೇಬ್ರಿಯಲ್ ಚಂಡಮಾರುತಕ್ಕೆ ನ್ಯೂಜಿಲೆಂಡ್ ದೇಶ ತತ್ತರಿಸಿ ಹೋಗಿದೆ. ಸಾವಿರಾರು ಮನೆಗಳು ಕತ್ತಲಕೂಪದಲ್ಲಿ ಮುಳುಗಿ ಹೋಗಿದೆ. ಪರಿಣಾಮ ಅಲ್ಲಿನ ಸರ್ಕಾರ ರಾಷ್ಟೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ದಿನ ರಾತ್ರಿ ಸುರಿದ ಮಳೆಯ ಪರಿಣಾಮ ಗೇಬ್ರಿಯಲ್ ಚಂಡಮಾರುತ ಉಂಟಾಗಿದ್ದು, ವಿದ್ಯುತ್‌ ಸಂಪರ್ಕ ಕಡಿತದಿಂದ ಲಕ್ಷಾಂತರ ಮನೆಗಳಿಗೆ ವಿದ್ಯುತ್‌ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆಕ್ಲೆಂಡ್, ನಾರ್ತ್‌ಲ್ಯಾಂಡ್, ತೈರಾವಿಟಿ, ಬೇ ಆಫ್ ಪ್ಲೆಂಟಿ, ವೈಕಾಟೊ ಮತ್ತು ಹಾಕ್ಸ್ ಬೇ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಉಂಟಾಗಿದೆ.

ಮಂಗಳವಾರ ಗಾಳಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತುರ್ತು ಸೇವೆಗಳಿಗೆ ಅಡ್ಡಿಯಾಗಬಹುದು. ನ್ಯೂಜಿಲೆಂಡ್‌ನ ಅತಿದೊಡ್ಡ ನಗರವಾದ ಆಕ್ಲೆಂಡ್‌ನ ಮಳೆ ನೀರು ಹಾಗೂ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ. ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಮನೆಯೊಂದು ಕುಸಿದು ಬಿದ್ದಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾಣೆಯಾಗಿದ್ದು, ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತುರ್ತು ನಿರ್ವಹಣಾ ಸಚಿವ ಕೀರನ್ ಮೆಕ್ಅನುಲ್ಟಿ ಹೇಳಿದ್ದಾರೆ.

Latest Indian news

Popular Stories