ಚಿಕ್ಕಮಗಳೂರು: ಕಾರು – ಟಿಟಿ ಮುಖಾಮುಖಿ ಢಿಕ್ಕಿ; ಮಗು ಸೇರಿ ಇಬ್ಬರು ಮೃತ್ಯು

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ (ಮೇ.11 ರಂದು) ನಡೆದಿದೆ.

ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಹಿನ್ನೆಲೆ: ಕಾರಿನಲ್ಲಿ ಹೊನ್ನಾವರದಿಂದ  ಸಂಬಂಧಿಕರ ಮದುವೆಗೆ ತೆರಳುತ್ತಿದ್ದ  ಗಿರಿಧರ್‌ ಕುಟುಂಬ ಬೆಂಗಳೂರು ಟು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬರುತ್ತಿದ್ದ ಟಿಟಿ ವಾಹನಕ್ಕೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಢಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಪಲ್ಟಿಯಾಗಿ 7 ಮಂದಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories