ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು.
ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವುಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳ ಜೆಹಾದಿ ಶಕ್ತಿಗಳ ಕೈವಾಡ ಇರುವ ಸಾಧ್ಯತೆ ಇದ್ದು ಇದರ ತನಿಖೆ ಸಿಬಿಐ ಗೆ ವಹಿಸಬೇಕು, ಇದರೊಂದಿಗೆ ರಾಜ್ಯದಲ್ಲಿ ನಡೆದ ವೇಣುಗೋಪಾಲ್ ಹತ್ಯೆ, ಬೆಂಗಳೂರಿನಲ್ಲಿ ನಡೆದ ಸರಣಿ ಹತ್ಯೆಗಳನ್ನು ಖಂಡಿಸಲಾಗಿ ರಾಜ್ಯದಲ್ಲಿ ಹಿಂದೂಗಳಿಗೆ ಭಯದಲ್ಲಿ ಓಡಾಡುವ ವಾತಾವರ ನಿರ್ಮಾಣ ವಾಗುತ್ತಿದ್ದು ಮುಖ್ಯಮಂತ್ರಿ ಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕೂಡಲೇ ಗ್ರಹ ಇಲಾಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಲಾಯಿತು. ತುಷ್ಟೀಕರಣ ನೀತಿಯನ್ನು ಕೈ ಬಿಡದಿದ್ದರೆ ಮುಂದೆ ಮತ್ತೆ ಬೀದಿಗಿಳಿದು ಹೋರಾಟ ಮಾಡುವೆವು ಎಂದರು. ಪಂಚ ಗ್ಯಾರಂಟಿಗಳ ಅವ್ಯವಸ್ಥೆಯಿಂದ ಜನ ರೋಸಿಹೋಗಿದ್ದಾರೆ. ಕೂಡಲೇ ಇದನ್ನು ಸರಿಪಡಿಸಿ ಜನರಿಗೆ ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನು ಒದಗಿಸಲು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮಾತನಾಡಿ ಸರಕಾರ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುವಲ್ಲಿ ಮೊದಲ ಹೆಜ್ಜೆಯಾಗಿ ಶಿಕ್ಷಣದಲ್ಲಿ ಕೋಮುವಾದ ತುಂಬಿದೆ, ನಂತರ ಬಜೆಟ್ ನಲ್ಲಿ ಅವರಿಗೆ ಮಾತ್ರ ಸಾಕಷ್ಟು ಘೋಷಣೆಗಳನ್ನು ಮಾಡಿದೆ, ಇಷ್ಟಲ್ಲದೆ ವರ್ಗಾವಣೆ ಧಂದೆ ಮೂಲಕ ಕೋಟ್ಯಂತರ ರೂಪಾಯಿ ಹಣದ ವ್ವವಹಾರ ಮಾಡಿ ಹೇಸಿಗೆ ಹುಟ್ಟಿಸುತ್ತದೆ. ಮತ್ತೆ ಮತ್ತೆ ಹಿಂದೂಗಳ ಹತ್ಯೆ ನಡೆದರೆ ಸುಮ್ಮನೆ ಕುಳಿತುಕೊಳ್ಳಲಾಗದು ಎಂದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಂಡಲ ಕಾರ್ಯದರ್ಶಿ ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಮಹಾಶಕ್ತಿಕೇಂದ್ರಗಳ ಅಧ್ಯಕ್ಷರುಗಳಾದ ವಿಶ್ವನಾಥ ಕುರ್ಕಾಲು, ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಪ್ರಮುಖರಾದ ಶಶಿಧರ್ ವಾಗ್ಳೆ, ಸುರೇಖ ಶೈಲೇಶ್, ಪದ್ಮನಾಭ ಕೊಡಂಗಳ, ಸುಬ್ರಹ್ಮಣ್ಯ ಪಾಂಗಳ, ಶಕ್ತಿಕೇಂದ್ರ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.