ಬೆಂಗಳೂರು/ದಕ್ಷಿಣ ಕ್ನನಡ: ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್.ಅಂಗಾರ (S Angara) ನಿವೃತ್ತಿ ಘೋಷಣೆ ಮಾಡಿದ್ದಾರೆ.
ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಆರು ಸುಳ್ಯ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ಶಾಸಕರಾಗಿದ್ದ ಎಸ್. ಅಂಗಾರ ಅವರಿಗೆ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅಂಗಾರ, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
7 ಬಾರಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಂಗಾರ, ಮೊದಲ ಬಾರಿಗೆ ಸೋಲನ್ನು ಅನುಭವಿಸಿದ್ದರು. ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷದಿಂದ ಮೀನುಗಾರಿಕೆ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು.