ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೆರ್‌ಬಾಲ್ ಜಿಲ್ಲೆಯ ಜೊಜಿಲಾ ಟನೆಲ್ ಸಮೀಪ ಹಿಮಪಾತ ಉಂಟಾಗಿದೆ. ಇದರಿಂದಾಗಿ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ.
ಹೈದರಾಬಾದ್‌ನ ಮೆಘ ಎಂಜಿನಿಯರಿಂಗ್ ಆ್ಯಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗಾಗಿ ಅವರು ಕೆಲಸ ಮಾಡುತ್ತಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಆ ವೇಳೆಗೆ ಅವರಿಬ್ಬರು ಅಸುನೀಗಿದ್ದರು. ಮತೃದೇಹಗಳನ್ನು ಕುಟುಂಬ ಸದಸ್ಯರಿಗೆ ಶೀಘ್ರವೇ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಪಾತದ ಫೋಟೋ ಮತ್ತು ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.