ಜಹಂಗೀರ್ ಪುರಿ ಹಿಂಸಾಚಾರ: ಇಬ್ಬರು ಅಪ್ರಾಪ್ತರು ಸೇರಿದಂತೆ 22 ಮಂದಿಯನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ರಾಷ್ಟ್ರ ರಾಜಧಾನಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ನಡೆದ ಘರ್ಷಣೆಯ ಹಿಂದಿನ ಮುಖ್ಯ ಸಂಚುಕೋರರು ಮತ್ತು ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಗುಂಡು ಹಾರಿಸಿದ ಇನ್ನೊಬ್ಬ ವ್ಯಕ್ತಿ ಸೇರಿದಂತೆ 20 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಬಾಲಾಪರಾಧಿಗಳನ್ನು ಸಹ ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಜಹಂಗೀರ್ ಪುರಿಯ ಸಿಡಿ ಪಾರ್ಕ್ ನಿವಾಸಿ ಎಂಡಿ ಅಸ್ಲಮ್ ಎಂಬಾತನಿಂದ ಪಿಸ್ತೂಲ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎರಡು ಸಮುದಾಯಗಳ ನಡುವಿನ ಘರ್ಷಣೆಯಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಗಿದ್ದು, ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಕೆಲವು ವಾಹನಗಳಿಗೂ ಬೆಂಕಿ ಹಚ್ಚಲಾಗಿದ್ದು, ಐಪಿಸಿ ಸೆಕ್ಷನ್ 307 ( ಕೊಲೆಗೆ ಯತ್ನ) 120 ಬಿ( ಕ್ರಿಮಿನಲ್ ಪಿತೂರಿ) 147 (ಗಲಭೆ) ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ವಾಯುವ್ಯ ವಿಭಾಗದ ಡಿಸಿಪಿ ಉಷಾ ರಂಗಣ್ಣಿ ಹೇಳಿದರು.

Latest Indian news

Popular Stories