ಜಾರ್ಖಂಡ್: ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬೆಲೆ ಲೀ.ಗೆ 25 ರೂ ಕಡಿತ!

ರಾಂಚಿ : ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂಪಾಯಿ ಕಡಿತಗೊಳಿಸುವ ನಿರ್ಧಾರವನ್ನು ಜಾರ್ಖಂಡ್ ಸರ್ಕಾರ ಬುಧವಾರ ಪ್ರಕಟಿಸಿದೆ.

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರ ಏರಿಕೆಯಿಂದ ಕೆಳ ಮತ್ತು ಮಧ್ಯಮ ಆದಾಯ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಮಟ್ಟದಲ್ಲಿ ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 25 ರೂಪಾಯಿ ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಘೋಷಣೆಯ ಬಳಿಕ ಪೆಟ್ರೋಲ್ ಬೆಲೆಯಲ್ಲಿನ ಕಡಿತವು ಜನವರಿ 26, 2022 ರಿಂದ ಜಾರಿಗೆ ಬರಲಿದೆ.

Latest Indian news

Popular Stories

error: Content is protected !!