ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಲ್ಲಿ ಕಾನ್‌ಸ್ಟೆಬಲ್ ಚೇತನ್ ಸಿಂಗ್‌ನಿಂದ ಕೊಲ್ಲಲ್ಪಟ್ಟ ಬೀದರಿನ ಸೈಯದ್ ಸೈಫುದ್ದಿನ್ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ
ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್‌ನಿಂದ ಕೊಲ್ಲಲ್ಪಟ್ಟ ಬೀದರ್ ತಾಲೂಕಿನ ಹಮಿಲಾಪುರ್ ಗ್ರಾಮದ ಸೈಯದ್ ಸೈಫುದ್ದೀನ್ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರ 10 ಲಕ್ಷ ಪರಿಹಾರ ನೀಡಲಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅರಣ್ಯ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ,’ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಆರ್‌ಪಿಎಫ್ ಪೇದೆ ಚೇತನ್ ಸಿಂಗ್ ಕ್ಷುಲ್ಲಕ ಕಾರಣಕ್ಕೆ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಬೀದರ್ ಜಿಲ್ಲೆಯ ಬೀದರ್ ಗಾದಗಿ ಬಳಿಯ ಹಮಿಲಾಪುರದ ಮುಗ್ಧ ಪ್ರಯಾಣಿಕ ಸೈಯದ್ ಸೈಫುದ್ದೀನ್
ಕುಟುಂಬದವರಿಗೆ 710 ಲಕ್ಷ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ.

ಮೃತರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ. ಈ ನೋವಿನ ಸಂದರ್ಭದಲ್ಲಿ ನಾವು ಅವರ ಜೊತೆಗೆ ಇರುತ್ತೇವೆ.” ಎಂದು ತಿಳಿಸಿದ್ದಾರೆ.

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ತನ್ನ ಸ್ವಯಂಚಾಲಿತ ರೈಫಲ್‌ನಿಂದ ಗುಂಡು ಹಾರಿಸಿ, ನಾಲ್ವರನ್ನು ಕೊಂದಿದ್ದನು.

ಆರ್‌ಪಿಎಫ್ ಸಹೋದ್ಯೋಗಿಯಾಗಿದ್ದ ಎಎಸ್‌ಐ ಟಿಕಾ ರಾಮ್ ಮೀನಾ, ಅಬ್ದುಲ್ ಕದಿರ್, ಅಸ್ಕರ್ ಕೈ, ಸೈಯದ್ ಸೈಫುದ್ದೀನ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದನು. ಸೈಯದ್ ಸೈಫುದ್ದೀನ್ ಹೈದರಾಬಾದ್‌ನ ಮೊಬೈಲ್ ಸರ್ವಿಸ್ ಅಂಗಡಿ ಒಂದರಲ್ಲಿ ಕೆಲಸ ಮಾಡಿಕೊಂಡು, ಅಲ್ಲೇ ನೆಲೆಸಿದ್ದರು. ಅಂಗಡಿಯ ಮಾಲೀಕರ ಜೊತೆಗೆ
ಅಜೀರ್‌ಗೆ ತೆರಳಿ ವಾಪಸ್ ಮುಂಬೈಗೆ ಬರುವ ವೇಳೆ ಈ ದುರ್ಘಟನೆ ನಡೆದಿತ್ತು. ಇವರಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳಿದ್ದಾರೆ.

Latest Indian news

Popular Stories