ಬೆಂಗಳೂರು, ಅ 12 : ಕಳೆದ ಮೂರು ದಶಕಗಳಿಂದ ಕೇಸರಿ ಪಕ್ಷಕ್ಕೆ ಗೆಲುವು ಸಿಗದೇ ಉಳಿದಿದ್ದ ಸ್ಥಾನವನ್ನು ತಮ್ಮದಾಗಿಸಿಕೊಳ್ಳುವ ಪ್ರಯತ್ನದಲ್ಲಿ ಕರ್ನಾಟಕ ಬಿಜೆಪಿಯು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾವ್ ಅವರು ಮಾಜಿ ಸಚಿವ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತರುಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಹಾಲಿ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸ್ಪರ್ಧಿಸಲಿದ್ದಾರೆ.
1994ರಲ್ಲಿ ಪ್ರಮೀಳಾ ನೇಸರಗಿ ಗೆದ್ದಾಗ ಮಾತ್ರ ಬಿಜೆಪಿ ಈ ಸ್ಥಾನವನ್ನು ಗೆದ್ದಿತ್ತು.
ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದ ರಾವ್ ಇತ್ತೀಚೆಗೆ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಬಿಜೆಪಿ ಸೇರಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾವ್, ಈ ಬಾರಿ ಬಿಜೆಪಿ ಕ್ಷೇತ್ರವನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
”ಎಲ್ಲರ ಬೆಂಬಲ, ವಿಶ್ವಾಸ ಪಡೆಯಲು ಶ್ರಮಿಸುತ್ತೇನೆ, ಸಿದ್ಧಾಂತ, ರಾಷ್ಟ್ರೀಯತೆಯಿಂದಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಕಳೆದ 30 ವರ್ಷಗಳಿಂದ ಚಾಮರಾಜಪೇಟೆ ಕ್ಷೇತ್ರವನ್ನು ಬಿಜೆಪಿ ಗೆದ್ದಿಲ್ಲ, ನಾನು ಇಲ್ಲಿ ಹೊಸಬನಲ್ಲ, ಇಲ್ಲಿನ ನಿವಾಸಿ” ಎಂದಿದ್ದಾತೆ
ಮತದಾನದ ದಿನವಾದ ಮೇ 10ರಂದು ಜನರಿಂದ ಉತ್ತರ ಸಿಗಲಿದೆ ಎಂದರು. ಕ್ಷೇತ್ರದಲ್ಲಿ ಭಿನ್ನಮತದ ಸಾಧ್ಯತೆಗಳ ಕುರಿತು ಕೇಳಿದ ಪ್ರಶ್ನೆಗೆ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಭಾಸ್ಕರ್ ರಾವ್ ಸಮರ್ಥಿಸಿಕೊಂಡರು. ಯಾವುದೇ ಸಮಸ್ಯೆ ಇದ್ದಲ್ಲಿ ಮುಖಂಡರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡುತ್ತೇನೆ. ಎಲ್ಲಾ ನಾಯಕರು ಬೆಂಬಲ ನೀಡಿದ್ದಾರೆ ಮತ್ತು ಒಗ್ಗಟ್ಟಿನ ಪ್ರಯತ್ನದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಕಲ್ಲಿದ್ದಲು ಸಚಿವರಿಗೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.