‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’: ಮಾಜಿ ಸಚಿವ ಡಾ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ (Dr Ashwath Narayan) ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ದೂರು ನೀಡಿದ್ದರು. ಅಂದಿನಿಂದ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಇಂದು ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಹಾಗಾಗಿ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು ಮಾಡಲಾಗಿದೆ. ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ ಎಂದು ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಅಶ್ವತ್ಥ್​ ನಾರಾಯಣ ಹೇಳಿಕೆ ನೀಡಿದ್ದರು.

Latest Indian news

Popular Stories