ಇತ್ತೀಚೆಗೆ, ದೇಶದ ಹಲವೆಡೆ ಭೂಕಂಪಗಳು ಭಯಭೀತಗೊಳಿಸುತ್ತಿವೆ. ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ರಾಜಸ್ಥಾನ ಮತ್ತು ಆಂಧ್ರಪ್ರದೇಶದಲ್ಲಿಯೂ ಭೂಕಂಪಗಳು ಸಂಭವಿಸುತ್ತವೆ.
ಕಳೆದ ತಿಂಗಳು ಎಪಿಯ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪ ಸಂಭವಿಸಿದ್ದು ಗೊತ್ತೇ ಇದೆ. ಭೂಕಂಪನದಿಂದ ಎನ್ ಟಿಆರ್ ಮತ್ತು ಪಲ್ನಾಡು ಜಿಲ್ಲೆಯ ನಿವಾಸಿಗಳು ಭಯದಿಂದ ತತ್ತರಿಸಿದ್ದಾರೆ. ಇತ್ತೀಚೆಗಷ್ಟೇ ತಿರುಪತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಭೀತಿಯಿಂದ ಜನರು ಮನೆ ಬಿಟ್ಟು ಹೊರಗೆ ಓಡಿ ಬಂದಿದ್ದರು.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ದೋರವರಿಸತ್ರ ಸೇರಿ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಏಕಾಏಕಿ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದ ಸಾಮಾನುಗಳು ಕೆಳಗೆ ಬಿದ್ದಿವೆ. ಇನ್ನು ಜನರು ಭಯಭೀತರಾಗಿ ತತ್ತರಿಸಿದ್ದು, ಜನರು ಮನೆಯಿಂದ ಹೊರಬಂದು ಬೀದಿಗೆ ಓಡಿದರು. ರಿಕ್ಟರ್ ಮಾಪಕದಲ್ಲಿ ಈ ಭೂಕಂಪದ ತೀವ್ರತೆ ಇನ್ನೂ ತಿಳಿದುಬಂದಿಲ್ಲ. ಆದ್ರೆ, ಇದುವರೆಗೂ ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟವಾಗಿಲ್ಲದ ಕಾರಣ ಅಧಿಕಾರಿಗಳು ನಿರಾಳರಾಗಿದ್ದಾರೆ. ಫೆಬ್ರವರಿಯಲ್ಲಿ, ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಳಯವನ್ನು ಸೃಷ್ಟಿಸಿತು. ಆದರೆ, ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.