ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.
ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಶವಾಗಾರದ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು ವೈದ್ಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಾವಣಗೆರೆ ತಾಲೂಕಿನ ಕಲ್ಕಕೇರಿ ಕ್ಯಾಂಪ್ ನಿವಾಸಿ ನೇತ್ರಾವತಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಹೆಣ್ಣು ಮಗು ಒಂದು ಕೆಜಿ 700 ಗ್ರಾಂ. ಹಾಗೂ ಗಂಡು ಮಗು ಒಂದು ಕೆಜಿ 800 ಗ್ರಾಂ ಇತ್ತು. ಗಂಡು ಮಗು ಸಾವನ್ನಪ್ಪಿದ್ದು ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.