ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.


55 ವರ್ಷದ ಪರಸಪ್ಪ ಗುಂಡಕರಜಗಿ ಹತ್ಯೆಯಾಗಿರುವ ದುರ್ದೈವಿ. ಬಸವನಬಾಗೇಬಾಡಿ ತಾಲೂಕಿನ ಕಾಮನಕೇರಿ‌ ನಿವಾಸಿಯಾದ ಪರಸಪ್ಪ ಕೆಲವು ದಿನಗಳಿಂದ ಅಮೋಘಸಿದ್ದ ಮಂದಿರದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದನು. ಆದ್ರೇ, ಯಾರೋ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ.


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Latest Indian news

Popular Stories