ಬೆಂಗಳೂರು: ಗುಜರಾತ್‌ನ ಅಮುಲ್ ಜತೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್ –ನಂದಿನಿ)ಯನ್ನು ವಿಲೀನಗೊಳಿಸುವ ಅಮಿತ್ ಶಾ ಅವರ ಹೇಳಿಕೆಗೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಗೆ ಶುಕ್ರವಾರ ಚಾಲನೆ ನೀಡಿದ್ದ ಅಮಿತ್ ಶಾ ಅವರು, ಗುಜರಾತ್ ಮತ್ತು ಕರ್ನಾಟಕದ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದರು.
ಅಮುಲ್–ನಂದಿನಿ ವಿಲೀನಕ್ಕೆ ಸಾಮಾಜಿಕ ಮಾಧ್ಯಮದ ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮುಲ್ ಇಲ್ಲದೆಯೂ ಕರ್ನಾಟಕ ಮತ್ತು ನಂದಿನಿ/ಕೆಎಂಎಫ್ ಉತ್ತಮವಾಗಿ ನಡೆಯಬಲ್ಲವು. ಅಮುಲ್‌ಗೆ ನಂದಿನಿ ಉತ್ತಮ ಪ್ರತಿಸ್ಪರ್ಧಿಯಾಗಬಹುದೇ ವಿನಾ, ಅಂಗಸಂಸ್ಥೆಯಲ್ಲ ಎಂದು ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಭಿಪ್ರಾಯಪಟ್ಟಿದ್ದಾರೆ.