ನವದೆಹಲಿ: ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
ಇದಕ್ಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಎಂಎಫ್ನ ನಂದಿನಿ (Nandini) ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಇಂದು ಹೇಳಿದ್ದಾರೆ.
ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.