ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ: ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯಕ್

ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಕರ್ನಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾ ನಾಯಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಾ ನಾಯಕ್ ಅವರು, ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

Latest Indian news

Popular Stories