ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ ಬಗ್ಗೆ ನಾನೇನು ಹೇಳಲಿ? ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದರೆ ನನಗೆ ಹೇಗೆಲ್ಲಾ ಕಿರುಕುಳ ನೀಡುತ್ತಿದ್ದಾರೆ ಎಂಬುದನ್ನು ಆಲೋಚಿಸಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.