ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ನಕಲಿ ಪತ್ರ – ಸಿದ್ದರಾಮಯ್ಯ

ಬೆಂಗಳೂರು: ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ.ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯನಡೆಸಿದ್ದಾರೆ.ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ‌ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ.

ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Latest Indian news

Popular Stories