ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಮುಖ್ಯಮಂತ್ರಿಗಳಿಗೆ ನನ್ನ ಎರಡೇ ಎರಡು ಸವಾಲು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
- ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ.
- ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್.ಯಡಿಯೂರಪ್ಪನವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು.
ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬಸವರಾಜ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ.
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಯಡಿಯೂರಪ್ಪನವರೇ ನಿಮ್ಮ ನರೇಂದ್ರಮೋದಿಯವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾ ಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ.
ಪಾಪ, ಯಡಿಯೂರಪ್ಪನವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.
ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನರೇಂದ್ರಮೋದಿಯವರು ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು; ಧೈರ್ಯವಿದ್ದರೆ ಒಂದು ಪತ್ರಿಕಾ ಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿ – ಸಿದ್ದರಾಮಯ್ಯ