ನವದೆಹಲಿ: ದೆಹಲಿಯಲ್ಲಿ “ಅತ್ಯಂತ ಕಳಪೆ” ಗುಣಮಟ್ಟದ ಗಾಳಿಯೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ.
ವಾಯು ಮಾಲಿನ್ಯವನ್ನು ಲೆಕ್ಕಿಸದೆಯೇ ಪಟಾಕಿ ಸಿಡಿಸುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಸಂಜೆ 4 ಗಂಟೆಗೆ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) 314 ರಷ್ಟಿತ್ತು. ಆದರೆ ಇಂದು ಬೆಳಗ್ಗೆ 8 ಗಂಟೆಗೆ ಅದು 341ಕ್ಕೆ ಏರಿಕೆಯಾಗಿದೆ.