ಹೊಸದಿಲ್ಲಿ: 2008ರಲ್ಲಿ ಮಹಾರಾಷ್ಟ್ರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿ, ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಅಪರಾಧಿ ವಸಂತ್ ಸಂಪತ್ ದುಪುರೆ (55) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು 2017ರ ಮೇ 3ರಂದು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಕೇಂದ್ರ ಗೃಹ ಸಚಿವಾಲಯದ ಮೂಲಕ ಕ್ಷಮಾದಾನ ಅರ್ಜಿಯು ಈ ವರ್ಷ ಮಾ.28ರಂದು ರಾಷ್ಟ್ರಪತಿ ಕಾರ್ಯಾಲಯವನ್ನು ತಲುಪಿತ್ತು.