ನಿಗದಿಯಂತೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗಳು ನಡೆಯಲಿದೆ: ಚುನಾವಣಾ ಆಯೋಗ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳು ನಿಗದಿಯಂತೆ ನಡೆಸಲು ಕೇಂದ್ರ ಚುನಾವಣಾ ಆಯೋಗ (ಸಿಇಸಿ) ನಿರ್ಧರಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಗುರುವಾರ ಸರ್ವಾನುಮತದ ತೀರ್ಮಾನ ಪ್ರಕಟಿಸಿದೆ.

ಕೋವಿಡ್‌ ನಿಯಮಗಳನ್ನು ಪಾಲಿಸಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ. ನಿಗದಿಯಂತೆ ಚುನಾವಣೆ ನಡೆಯಬೇಕೆಂದು ಎಲ್ಲಾ ರಾಜಕೀಯ ಪಕ್ಷಗಳು ಕೋರಿಕೊಂಡಿವೆ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ಮತದಾನದ ವೇಳೆ ಮತದಾರರು ಭೌತಿಕ ಅಂತರ ಕಾಯ್ದುಕೊಳ್ಳಲು ಮತಗಟ್ಟೆಗಳ ಸಂಖ್ಯೆ ಹೆಚ್ಚಿಸುವುದಾಗಿ ತಿಳಿಸಿದೆ.

ಆದರೆ, ದೇಶದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ ರೂಪಾಂತರಿಯ ತೀವ್ರತೆ ದೃಷ್ಟಿಯಲ್ಲಿರಿಸಿಕೊಂಡು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮುಂದೂಡುವ ಅಂಶ ಪರಿಶೀಲಿಸುವಂತೆ ಅಲಹಾಬಾದ್ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ ಎಂದು ತಿಳಿದುಬಂದಿದೆ ಈ ವಿಷಯದ ಬಗ್ಗೆ . ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದಲ್ಲಿ ಚುನಾವಣಾ ಆಯುಕ್ತರು ಸಭೆ ನಡೆಸಿ ಪರಿಶೀಲಿಸಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗೆ ಹೋಗಲು ಆಸಕ್ತಿ ತೋರಿವೆ ಎಂದು ಹೇಳಿದೆ.

Latest Indian news

Popular Stories

error: Content is protected !!