ಉಡುಪಿ:ಪಕ್ಷ ಅವಕಾಶ ಕೊಟ್ಟರೆ ಜನರ ಸೇವೆ ಮಾಡುತ್ತೇನೆ.ಅವಕಾಶ ಸಿಗದಿದ್ದರೆ ಪಕ್ಷದ ಸೇವೆ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಉಡುಪಿಯಲ್ಲಿ ಹೇಳಿದ್ದಾರೆ.
ನಾನು ಯಾವುದೇ ಷರತ್ತು ಹಾಕಿ ಬಿಜೆಪಿಗೆ ಬಂದಿಲ್ಲ.ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ.ಅವಕಾಶ ಸಿಗದಿದ್ದರೆ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆ ಎಂದರು
ಮೋದಿ ಯನ್ನು ಹೊಗಳದೆ ಈ ದೇಶದಲ್ಲಿ ಇನ್ಯಾರನ್ನು ಹೊಗಳಲಿ? ದೇಶ ಹೊಗಳುವಾಗ ನಾನು ಹೊಗಳದೆ ಇರುವುದು ಮೂರ್ಖತನ.ಇದೇ ರೀತಿ ಮೋದಿಯನ್ನು ಟೀಕಿಸಿದರೆ ಸಿಗುವ ನಾಲ್ಕು ಓಟು ಸಿಗಲ್ಲ.ಸಿದ್ದರಾಮಯ್ಯ ಡಿಕೆಶಿಗೆ ಪುಕ್ಸಟ್ಟೆ ಸಲಹೆ ಕೊಡುತ್ತೇನೆ ಎಂದ ಪ್ರಮೋದ್ ಮಧ್ವರಾಜ್,ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದೆ.ಬಿಜೆಪಿ ಈ ಬಾರಿ 150 ಸ್ಥಾನ ಗೆಲ್ಲುತ್ತದೆ ಸಂಪೂರ್ಣ ಬಹುಮತ ಬರಲಿದೆ. ಯತ್ನಾಳ್ ಯಡಿಯೂರಪ್ಪ ಬಗ್ಗೆ ಮಾತಾಡಲ್ಲ ಅಂದಿದ್ದಾರೆ
ಪ್ರಧಾನಿ ಮೋದಿ ಅಮಿತ್ ಶಾ ರಾಜ್ಯ ಪ್ರವಾಸ ಶುರುಮಾಡಿದ್ದಾರೆ.ರಾಜ್ಯದಲ್ಲಿ ರಿಪೇರಿ ಶುರುವಾದಾಗ ಎಲ್ಲಾ ಗೊಂದಲ ಸರಿಯಾಗುತ್ತದೆ ಎಂದು ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದರು.