ಪಕ್ಷ ಬಯಸಿದರೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ – ಯೋಗಿ ಆದಿತ್ಯನಾಥ್

ಲಕ್ನೋ : ಪಕ್ಷ ಬಯಸಿದರೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ, ‘ನಾನು ಹಿಂದೆಯೂ ಚುನಾವಣೆಗೆ ಸ್ಪರ್ಧಿಸಿದ್ದೆ, ಪಕ್ಷ ಬಯಸಿದರೆ 2022 ರಲ್ಲಿ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಿದ್ದ’ ಎಂದರು.

ನಮ್ಮ ಪಕ್ಷಕ್ಕೆ ಸಂಸದೀಯ ಸಮಿತಿ ಇದ್ದು, ಅದು ಯಾರು ಎಲ್ಲಿಂದ ಸ್ಪರ್ಧಿಸಬೇಕು ಎಂದು ನಿರ್ಣಯ ಮಾಡುತ್ತದೆ’ ಎಂದರು.

‘ನಮ್ಮ ಸರಕಾರ 2017 ರಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ದೀಪಾವಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗಿದೆ 4.5 ಲಕ್ಷ ಜನರಿಗೆ ಹೊಸ ಉದ್ಯೋಗಾವಕಾಶಗಳನ್ನು ಕಲ್ಪಿಸಿದ್ದೇವೆ’ ಎಂದರು.

ಸಂಸದರಾಗಿದ್ದ ಯೋಗಿ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

Latest Indian news

Popular Stories

error: Content is protected !!