ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ

ಕಲಬುರಗಿ: ರಾಜ್ಯದ ಪಠ್ಯಪುಸ್ತಕದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಕೇಶವ ಬಲಿರಾಮ ಹೆಡಗೆವಾರ್ ಅವರ ಭಾಷಣ ಸೇರ್ಪಡೆಯಾದರೆ ತಪ್ಪೇನು. ಅವರೊಬ್ಬ ರಾಷ್ಟ್ರವಾದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ‌ಸಿ.ಟಿ. ರವಿ ಸಮರ್ಥಿಸಿಕೊಂಡರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಅದನ್ನು ಮಕ್ಕಳಿಗೆ ತಿಳಿಸುತ್ತಿದ್ದೇವೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.

ಪ್ರತಿ ಸರಕಾರ ಆಡಳಿತ ನಡೆಸುವ ದೂರದೃಷ್ಟಿ ಇಟ್ಟುಕೊಂಡಿರುತ್ತದೆ. ಬಿಜೆಪಿ ರಾಷ್ಟ್ರವಾದ ತತ್ವ ಮತ್ತು ಚಿಂತನೆ ಹೊಂದಿದೆ ಎಂದರು.

ತ್ರಿಪುರಾದಲ್ಲಿ ಬದಲಾವಣೆಯಾದಂತೆ ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬದಲಾವಣೆ ‌ಆಗಲಿದೆಯೇ ಎಂಬ ಪ್ರಶ್ನೆಗೆ, ಇಲ್ಲ ಮುಂದಿ‌ನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಬೇಡವೋ‌ ಎಂಬುದನ್ನು ಅವರು ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದರು.

Latest Indian news

Popular Stories