ವಿಜಯಪುರ: ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಇಲ್ಲಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಶಿಕ್ಷೆಗೊಳಗಾದ ಆರೋಪಿಯನ್ನು ಅಬ್ದುಲ್ ಮೋರಟಗಿ ಎಂದು ಗುರುತಿಸಲಾಗಿದೆ. ಆರೋಪಿಯು ಕಳೆದ 2015 ರ ಸೆಪ್ಟೆಂಬರ್ 25 ರಂದು ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅಧಿಕಾರಿಗಳು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮದ್ವೇಶ ದಬೇರ ಅವರು ವಾದ-ಪ್ರತಿವಾದ ಆಲಿಸಿ ಆರೋಪಿಯ ಮೇಲಿನ ಆರೋಪ ರುಜವಾತದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದರು. ಸರ್ಕಾರದ ರವಾಗಿ 4 ನೇ ಅಧೀಕ ಸರ್ಕಾರಿ ಅಭಿಯೋಜಕ ವಿ.ಜಿ. ಮಾಮನಿ ವಾದ ಮಂಡಿಸಿದ್ದರು.