ಪುನೀತ್ ರಾಜ್‍ಕುಮಾರ್ ನಿಧನ: ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಖ್ಯಾತ ನಟ ಪುನೀತ್ ರಾಜ್​ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.

ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಪ್ರಕಟಣೆ ಹೊರಡಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಅಗಲಿಕ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ‌ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆಂದು ತಿಳಿದುಬಂದಿದೆ.

Latest Indian news

Popular Stories

error: Content is protected !!