ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆ ಸರಿಯಿದೆಯಾದರೂ ಆದರೆ ಅದಕ್ಕೆ ಸಂಪನ್ಮೂಲಗಳ ಕ್ರೌಡಿಕರಣ ಹೇಗೆ ಮಾಡುತ್ತೀರ ಅದನ್ನು ಹೇಳಿ, ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಲೆಕ್ಕಾಚಾರವಿಲ್ಲದ ಪ್ರಣಾಳಿಕೆ ಎನ್ನುತ್ತಿದ್ದರು. ಈಗ ಬಿಜೆಪಿಯವರು ತಮ್ಮ ಪ್ರಣಾಳಿಕೆ ಜಾರಿಗೆ ಯಾವ ಲೆಕ್ಕಾಚಾರ ಹೊಂದಿದ್ದಾರೆ ಎಂಬುದನ್ನು ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.