ಪ್ರತಿಪಕ್ಷಗಳ ಹಲವು ನಾಯಕರು ಬಿಜೆಪಿ ಸೇರಲು ಒಲವು; ಸಿಎಂ ಬೊಮ್ಮಾಯಿ ಸುಳಿವು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ದುರ್ಬಲವಾಗಿರುವ ದಕ್ಷಿಣ ಕರ್ನಾಟಕದತ್ತ ಬಿಜೆಪಿ ತನ್ನ ಗಮನ ಕೇಂದ್ರೀಕರಿಸಿದೆ. ಈ ಪ್ರದೇಶದಲ್ಲಿ ಪಕ್ಷದ ಪರವಾದ ಅಲೆ ಇದ್ದು, ಇತರ ಪಕ್ಷಗಳ ನಾಯಕರು ಶೀಘ್ರದಲ್ಲೇ ಕೇಸರಿ ಪಕ್ಷ ಸೇರಲಿದ್ದಾರೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ಹಳೆ ಮೈಸೂರು ಅಥವಾ ದಕ್ಷಿಣ ಕರ್ನಾಟಕದ ಬೆಲ್ಟ್‌ಗೆ ಒಳಪಡುವ ಮಂಡ್ಯದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಸಭೆ ನಡೆಸುವ ಬಗ್ಗೆ ಪಕ್ಷ ಚರ್ಚೆ ನಡೆಸುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಗ್ಗೆ ಜನರಲ್ಲಿ ಅದರಲ್ಲೂ ಯುವಕರಲ್ಲಿ ಅಪಾರ ಒಲವು ಇದೆ. ಹಾಗಾಗಿ ಮಂಡ್ಯ ಮತ್ತು ಮೈಸೂರು ಭಾಗದಲ್ಲಿ ಹೊಸ ಮತ್ತು ಯುವ ನಾಯಕತ್ವ ಹೊರಹೊಮ್ಮುವ ಸಾಧ್ಯತೆಯಿದೆ. ಇಲ್ಲಿ ಬಿಜೆಪಿ ಪರ ಅಲೆ ಇದೆ. ನಾವು ಹಲವಾರು ಜನರೊಂದಿಗೆ ಸಂಪರ್ಕದಲ್ಲಿದ್ದು, ಪಕ್ಷ ಮತ್ತು ಅದರ ಸಿದ್ಧಾಂತವನ್ನು ಒಪ್ಪುವ ಯಾರೇ ಆದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಕರ್ನಾಟಕದ ದಕ್ಷಿಣ ಜಿಲ್ಲೆಗಳನ್ನು ಒಳಗೊಂಡಿರುವ ಹಳೆ ಮೈಸೂರು ಪ್ರದೇಶವು ಒಕ್ಕಲಿಗ ಸಮುದಾಯದ ಪ್ರಾಬಲ್ಯ ಹೊಂದಿದೆ ಮತ್ತು ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಭದ್ರಕೋಟೆಯಾಗಿದೆ. ಇಲ್ಲಿ ರಾಜಕೀಯ ನೆಲೆ ಕಂಡುಕೊಳ್ಳುವ ಗುರಿಯೊಂದಿಗೆ ಬಿಜೆಪಿ ಸತತ ಪ್ರಯತ್ನ ಮಾಡುತ್ತಿದೆ.

Latest Indian news

Popular Stories