ಪ್ರವಾಹಕ್ಕೆ ಆಂಧ್ರ ತತ್ತರ: ಸಾವಿನ ಸಂಖ್ಯೆ 33ಕ್ಕೆ ಏರಿಕೆ; ಹೆದ್ದಾರಿಗಳು ಬಂದ್, ಸಂಕಷ್ಟದಲ್ಲಿ ಜನರು!

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕಾರಣ ಪೆನ್ನಾ ನದಿ ಉಕ್ಕಿ ಹರಿದ ಪರಿಣಾಮ ದಕ್ಷಿಣ ಮತ್ತು ಪೂರ್ವಕ್ಕೆ ಸಂಪರ್ಕ ಕಲ್ಪಿಸುವ ಆಂಧ್ರಪ್ರದೇಶದ ಮುಖ್ಯ ರೈಲು ಮತ್ತು ರಸ್ತೆ ಮಾರ್ಗಗಳು ಕಡಿತಗೊಂಡಿವೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-16 ಅನ್ನು ಎಸ್‌ಪಿಎಸ್ ನೆಲ್ಲೂರು ಜಿಲ್ಲೆಯ ಪಡುಗುಪಾಡುವಿನಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ.

ಪಡುಗುಪಾಡು ರೈಲ್ವೆ ಹಳಿಯ ಮೇಲೆ ಪ್ರವಾಹ ಉಕ್ಕಿ ಹರಿಯುತ್ತಿದ್ದು ಚೆನ್ನೈ-ವಿಜಯವಾಡ ಗ್ರ್ಯಾಂಡ್ ಟ್ರಂಕ್ ಮಾರ್ಗದಲ್ಲಿ ಕನಿಷ್ಠ 17 ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇತರ ಮೂರು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಅಥವಾ ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ನಂದಲೂರು-ರಾಜಂಪೇಟೆ ವಿಭಾಗದಲ್ಲಿ ಚೆಯ್ಯೆರು ಪ್ರವಾಹದ ಪರಿಣಾಮ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಪರಿಶೀಲನೆ ನಡೆಸಿದರು. ಟ್ರ್ಯಾಕ್ ಮರುಸ್ಥಾಪನೆ ಕಾರ್ಯಗಳು ಭರದಿಂದ ಸಾಗುತ್ತಿವೆ ಎಂದು ಎಸ್‌ಸಿಆರ್ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲಾ ಗುಣಮಟ್ಟದ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿ ಮರುಸ್ಥಾಪನೆ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಪ್ರಧಾನ ವ್ಯವಸ್ಥಾಪಕರು ಅಧಿಕಾರಿಗಳಿಗೆ ಸೂಚಿಸಿದರು. ಏತನ್ಮಧ್ಯೆ, ವಿಜಯವಾಡ ವಿಭಾಗದ ನೆಲ್ಲೂರು-ಪಡುಗುಪಾಡು ವಿಭಾಗದಲ್ಲಿ ರೈಲು ಹಳಿಯಲ್ಲಿ ನೀರು ತುಂಬಿರುವ ಕಾರಣ ಶನಿವಾರ ಮತ್ತು ಭಾನುವಾರ ಕನಿಷ್ಠ 10 ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ.

Latest Indian news

Popular Stories

error: Content is protected !!