ಮಂಗಳೂರು, ಜನವರಿ 20: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 5 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಮೊಹಮ್ಮದ್ ಷರೀಫ್ ಮತ್ತು ಮಸೂದ್ ಕೊಲೆ ಪ್ರಕರಣದ ಆರೋಪಿಗಳೆಂದು ಗುರುತಿಸಲಾಗಿದೆ.
ತಲೆಮರೆಸಿಕೊಂಡಿರುವ ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮಹಮ್ಮದ್ ಶರೀಫ್ ನಿಷೇಧಿತ ಸಂಘಟನೆ ಪಿಎಫ್‌ಐನ ಕಾರ್ಯಕಾರಿ ಸಮಿತಿ ಸದಸ್ಯನಾಗಿದ್ದು, ಮಸೂದ್ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ನಿವಾಸಿಯಾಗಿದ್ದಾನೆ.
ಇದಕ್ಕೂ ಮುನ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪತ್ತೆಗೆ ಎನ್‌ಐಎ 14 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
ಸುಳ್ಯ ತಾಲೂಕಿನ ಬೆಳ್ಳಾರೆ ಬೂದುಮನೆ ಹಾಗೂ ಮಡಿಕೇರಿಯ ಗುದ್ದಿಗೆ ನಿವಾಸಿಗಳಾದ ಮುಸ್ತಫಾ ಮತ್ತು ತುಫೈಲ್ ತಲಾ 5 ಲಕ್ಷ ರೂ., ಸುಳ್ಯದ ಕಲ್ಲುಮುಟ್ಲು ಮತ್ತು ಬೆಳ್ಳಾರೆ ನಿವಾಸಿಗಳಾದ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ತಲಾ 2 ಲಕ್ಷ ರೂ.ಘೋಷಿಸಲಾಗಿತ್ತು. ಪಿಎಫ್‌ಐಗೆ ಸೇರಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.
ಜುಲೈ 26, 2022 ರಂದು ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರು.