ಪುತ್ತೂರು, ಫೆ.14: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಎಸ್‌ಡಿಪಿಐ ನಿರ್ಧರಿಸಿದೆ.
ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ನೇತೃತ್ವದಲ್ಲಿ ಫೆ.10ರಂದು ತಾಲೂಕಿನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಎಸ್‌ಡಿಪಿಐ ಪುತ್ತೂರು ವಲಯ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಮಾತನಾಡಿ, ಶಾಫಿ ಬೆಳ್ಳಾರೆ ಎಸ್‌ಡಿಪಿಐ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಆರು ತಿಂಗಳ ಹಿಂದೆಯೇ ನಿರ್ಧರಿಸಲಾಗಿತ್ತು. ನಂತರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹಾಗಾಗಿ ಶಫಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಅಧಿಕೃತ ಘೋಷಣೆಯನ್ನು ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿ ಮಾಡಲಿದ್ದಾರೆ.
ಪಕ್ಷದ ಮೂಲಗಳು, “ಶಫಿ ವಿರುದ್ಧದ ಆರೋಪ ಸಾಬೀತಾಗಿಲ್ಲ. ವಿಚಾರಣಾಧೀನ ಕೈದಿ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು ಮತ್ತು ಚುನಾವಣೆಗೆ ಸ್ಪರ್ಧಿಸಬಹುದು. ಶಫಿ ಅಭ್ಯರ್ಥಿಯಾಗಲು ಯಾವುದೇ ಕಾನೂನು ಸಮಸ್ಯೆ ಎದುರಾದರೆ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಬ್ರಾಹಿಂ ಸಾಗರ್ ಅವರನ್ನು ಕಣಕ್ಕಿಳಿಸಲಾಗುವುದು.