ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಜರಂಗ ದಳದೊಂದಿಗೆ ಹನುಮಂತನನ್ನು ಹೋಲಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಹೀಗೆ ಪ್ರಧಾನಿ ಹೋಲಿಕೆ ಮಾಡುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಕೋಟ್ಯಂತರ ಹನುಮಂತನ ಭಕ್ತರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕಿಡಿಕಾರಿದ್ದಾರೆ.
ಪ್ರಧಾನ ಮಂತ್ರಿ ಭಗವಾನ್ ಹನುಮಂತನ ಮೇಲಿನ ನಮ್ಮ ನಂಬಿಕೆಯನ್ನು ಅವಮಾನಿಸುತ್ತಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಅವರು ದೇಶದ ಕ್ಷಮೆಯಾಚಿಸಬೇಕು. ಭಜರಂಗ ಬಲಿಯನ್ನು ಅವಮಾನಿಸುವ ಹಕ್ಕನ್ನು ಯಾರೂ ಪ್ರಧಾನಿಗೆ ನೀಡಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.