ಬಡತನದಲ್ಲಿ ಹುಟ್ಟಿ ಬೆಳೆದ ಗಾಯತ್ರಿ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ

ಕೋಲಾರ: ಸಿವಿಲ್ ಕೋರ್ಟ್​​ನ ಯುವ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯತ್ರಿ ಅವರು ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.

ಗಾಯತ್ರಿರವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಮಗಳಾಗಿದ್ದಾಳೆ.ಬಡತನದಲ್ಲೇ ಬೆಳೆದು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿ ಅವರು 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿ ಅವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಧ್ಯಾಭ್ಯಾಸ ಪಡೆದು, ಬಾಲಕಿಯರ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು. ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದರು.

Latest Indian news

Popular Stories