ಬಸ್ ಅಪಘಾತ: ಆರು ಮಂದಿ ಮೃತ್ಯು

ಬಹ್ರೈಚ್ (ಉತ್ತರ ಪ್ರದೇಶ): ಬಹ್ರೈಚ್‌ನ ತಪ್ಪೆ ಸಿಪಾದಲ್ಲಿ ರೋಡ್‌ವೇಸ್ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಲಿಗ ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ರಾಜೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

Latest Indian news

Popular Stories

error: Content is protected !!