ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ, ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರು ಗೆಲ್ಲಬೇಕು ಅಂತಾ ನೀವು ನಿರ್ಣಯ ತೆಗೆದುಕೊಳ್ಳಬೇಕು. ನೀವು ಗೆಲ್ಲಿಸಿದ ಶಾಸಕರನ್ನು ಕಿತ್ತುಕೊಂಡು ಸರ್ಕಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 140-150 ಸ್ಥಾನ ಗೆಲ್ಲಬೇಕು. ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ ಮಾಡುತ್ತೇವೆ. ಸಾಮಾನ್ಯವಾಗಿ ಭರವಸೆ ನೀಡಲ್ಲ, ನೀಡಿದರೆ ಮಾಡಿ ತೋರಿಸುತ್ತೇವೆ.
ಪ್ರಧಾನಿ ಮೋದಿ ರೀತಿ ನಾನು ಸುಳ್ಳು ಆಶ್ವಾಸನೆಯನ್ನು ನೀಡಲ್ಲ. ನಾವು ಅಧಿಕಾರದಲ್ಲಿದ್ದಾಗ 371ಜೆ ಜಾರಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕದಲ್ಲಿ ಬೋರ್ಡ್ ಸಹ ಸ್ಥಾಪಿಸಲಿಲ್ಲ ಎಂದರು.