ಬಿಜೆಪಿ ಕೊಳೆತು ನಾರುತ್ತಿದೆ,ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಿಲ್ಲಿಸಬೇಕು -ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಬಿಜೆಪಿಯಲ್ಲೇ ಕೊಳೆತು ನಾರುತ್ತಿದೆ, ಅದನ್ನು ನೋಡುವುದು ಬಿಟ್ಟು, ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಮ್ಮ ರಾಷ್ಟ್ರೀಯ ನಾಯಕರ ಬಗ್ಗೆ ನಳಿನ್ ಕುಮಾರ್ ಕಟೀಲ್ ಹಗುರವಾಗಿ ಮಾತನಾಡಿ, ನಾಲಗೆಯನ್ನು ಹೊರಹಾಕಿದ್ದಾರೆ. ಇದನ್ನು ನಾನು ಖಂಡನೆ ಮಾಡುತ್ತೇನೆ, ವಿಧಾನಸೌಧದಲ್ಲಿ ಬ್ಲೂಫಿಲಂ ನೋಡಿದವರು ಬಿಜೆಪಿಯಲ್ಲಿ ಇದ್ದಾರೆ. ರೇಪ್ ಕೇಸಿನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಹಾಕಿಕೊಂಡ ಮಂತ್ರಿಗಳು ಇರುವುದು ಬಿಜೆಪಿಯಲ್ಲಿ”ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಬಗ್ಗೆ ನಳಿನ್ ಕುಮಾರ್ ಕಟೀಲ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಬೇಳೂರು. ಅವರದೇ ಪಕ್ಷದ ನಾಯಕರೆನ್ನಿಸಿಕೊಂಡವರು, ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಬಿಜೆಪಿಯಲ್ಲೇ ಅತ್ಯಾಚಾರಿಗಳಿದ್ದಾರೆ. ಅವರೇ ಹಲವು ಸ್ಕ್ಯಾಂಡಲ್‌ಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಇವೆಲ್ಲದರ ಬಗ್ಗೆ ಗೊತ್ತಿರುವ ಕಟೀಲು, ನಮ್ಮ ಕೇಂದ್ರ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ. ಒಬ್ಬ ರಾಜ್ಯಾಧ್ಯಕ್ಷನಾಗಿ ಅವರ ಹೇಳಿಕೆ ಸರಿಯಲ್ಲ ಎಂದು ಕಿಡಿಕಾರಿದರು‌.

Latest Indian news

Popular Stories

error: Content is protected !!