ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಪಠಾಣ್’ ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ.
ಈ ಮಧ್ಯೆ ಚಿತ್ರ ಪ್ರದರ್ಶನಕ್ಕೆ ದೇಶದ ವಿವಿಧೆಡೆ ವಿರೋಧ ವ್ಯಕ್ತವಾಗುತ್ತಿದೆ. ಬಿಹಾರದ ಚಿತ್ರಮಂದಿರವೊಂದರ ಹೊರಗಡೆ ಎಬಿವಿಪಿ ಮತ್ತು ಭಜರಂಗ ದಳದ ಕಾರ್ಯಕರ್ತರು ಚಿತ್ರದ ಫೋಸ್ಟರ್ ಹರಿದು, ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರ ಬಿಡುಗಡೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.