ಬೆಂಗಳೂರು: ರಾಜ್ಯದಲ್ಲಿ ಗಾಂಜಾ ದಂಧೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಬಯಲಲಾಗಿದೆ ಬಂದಿದೆ.
ಇಬ್ಬರು ಪೊಲೀಸ್ ಕಾನ್ಸ್ ಟೆಬಲ್ಗಳು ಯವಕನೊಬ್ಬನ ಬ್ಯಾನ್ ನಲ್ಲಿ ಗಾಂಜಾ ಇಟ್ಟು ಹಣದ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿತ್ತು.
ಹೀಗಾಗಿ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿದ್ದು, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸಿ.ಕೆ.ಬಾವಾ ಸ್ಪಷ್ಟನೆ ನೀಡಿದ್ದಾರೆ.
ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ’ ಎಂದು ಬಾವಾ ಹೇಳಿದ್ದಾರೆ.ಕಳೆದ ವಾರ ವೈಭವ್ ಪಾಟೀಲ್ ಎಂಬುವರು ತಮ್ಮ ಟ್ವೀಟರ್ ಖಾತೆಯಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯಿಂದ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ನೋವಿನಿಂದ ಬರೆದುಕೊಂಡಿದ್ದರು. ಅನಗತ್ಯವಾಗಿ ನನ್ನನ್ನು ಮಾದಕ ವಸ್ತು ಕಾಯ್ದೆ ಪ್ರಕರಣಕ್ಕೆ ಸಿಲುಕಿಸಲಾಗುತ್ತಿದೆ ಎಂದು ಅವರು ದೂರಿದ್ದರು.