ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ವಿಕಲಚೇತನ ವ್ಯಕ್ತಿ ಬಲಿಯಾದ ಘಟನೆ ನಾಯಂಡನಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಮೃತನನ್ನು ದೊರೆಸ್ವಾಮಿ (45) ಎಂದು ಗುರುತಿಸಲಾಗಿದೆ. ನಾಯಂಡನಹಳ್ಳಿ ಜಂಕ್ಷನ್ ಬಳಿ ಬುಲೆಟ್ ಬೈಕ್ ನಲ್ಲಿ ಬಂದ ಸವಾರ ಡಿಕ್ಕಿ ಹೊಡೆದಿದ್ದಾನೆ.
ಸದ್ಯ ಬೈಕ್ ಸವಾರನನ್ನು ಬ್ಯಾಟರಾಯನಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.