ಬೆಂಗಳೂರು: ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಎಂಟು ಜನರನ್ನು ಬಂಧಿಸಿ 6.31 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಶಂಕಿತರು ಹೊಸ ವರ್ಷದ ಮುನ್ನಾದಿನದ ಆಚರಣೆಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲು ಉದ್ದೇಶಿಸಿದ್ದರು.
ಮೊದಲ ದಾಳಿಯಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ನಿವಾಸಿಗಳಾದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅವರು ಗೋವಾ, ದೆಹಲಿ, ಆಂಧ್ರಪ್ರದೇಶ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ನೈಜೀರಿಯನ್ನರಿಂದ ಡ್ರಗ್ಸ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಕೊತ್ತನೂರಿನಲ್ಲಿ ಡ್ರಗ್ಸ್ ಸಂಗ್ರಹಿಸಲು ಬಾಡಿಗೆಗೆ ಪಡೆದು ಹೊಸ ವರ್ಷಾಚರಣೆ ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯೋಜಿಸಿದ್ದರು ಎಂದು ತಿಳಿದು ಬಂದಿದೆ.