ಬೆಂಗಳೂರು: ತೆಲುಗು ನಟ ನಂದಮೂರಿ ತಾರಕರತ್ನ ವಿಧಿವಶ

ಬೆಂಗಳೂರು: ತೆಲುಗಿನ ಖ್ಯಾತ ನಟ ನಂದಮೂರಿ ತಾರಕತ್ನ  ವಿಧಿವಶರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.  ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ನಾರಾಯಣ ಹೃದಯಾಲಯದಲ್ಲಿ  ಕಳೆದ 23 ದಿನಗಳಿಂದ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಆಂಧ್ರಪ್ರದೇಶದ ಕುಪ್ಪಂನಲ್ಲಿ ಜನವರಿ 27 ರಂದು ಟಿಡಿಪಿ ಪಾದಯಾತ್ರೆ ವೇಳೆ ಹೃದಯಾಸ್ತಂಭನದಿಂದ ಕುಸಿದು ಬಿದಿದ್ದರು. ನಂತರ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು.

ನಂದಮೂರಿ ತಾರಕ ರತ್ನ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂಭಾಗ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. 

1983ರಲ್ಲಿ ಜನಿಸಿದ ನಂದಮೂರಿ ತಾರಕರತ್ನ ಜ್ಯೂನಿಯರ್ ಎನ್ ಟಿಆರ್ ಅವರ  ಸಹೋದರನಾಗಿದ್ದು, ಯುವರತ್ನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕೆಲಹೊತ್ತಿನಲ್ಲಿಯೇ ಪಾರ್ಥಿವ ಶರೀರವನ್ನು ಹೈದರಾಬಾದ್ ಗೆ ಕರೆದೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest Indian news

Popular Stories