ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಭೀಕರ ಅಪಘಾತ: ಆರು ಮಂದಿ ಮೃತ್ಯು

ಅನಂತಪುರ: ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋವೊಂದಕ್ಕೆ ವೇಗವಾಗಿ ಬಂದ ಟ್ರಕ್‌ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಅಪಘಾತ ಸಂಭವಿಸಿದೆ.

ಆಟೋದಲ್ಲಿ ಕೃಷಿ ಕಾರ್ಮಿಕರು ಹೆಚ್ಚಾಗಿ ಮಹಿಳೆಯರೇ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಲಾರಿ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಅನಂತಪುರದ ಪಾಮಿಡಿ ಮಂಡಲ ಸಮೀಪದ ಕೊಪ್ಪಲ್ಲಕೊಂಡ ಗ್ರಾಮದವರು.

ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಏತನ್ಮಧ್ಯೆ, ಗಾಯಗೊಂಡ ಅನೇಕ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.

Latest Indian news

Popular Stories

error: Content is protected !!