ಬೆಳ್ತಂಗಡಿ, ಜ.26: ಮೂಡಿಗೆರೆಯ ಆಲ್ದೂರು ಬಳಿಯ ವಸ್ತಾರೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಟ್ರಾಕ್ಟರ್ ಹರಿದು ಬೈಕ್ ಸವಾರ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಈ ದಾರುಣ ಘಟನೆ ನಡೆದಿದೆ.
ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35) ಅಪಘಾತಕ್ಕೀಡಾದ ದುರ್ದೈವಿ.
ಪಿಲಿಯನ್ ರೈಡರ್ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಲೈಮಾನ್ ಮೂಸಾ ಕುಂಞಿ ಮತ್ತು ಬೀಫಾತಿಮಾ ದಂಪತಿಯ ಪುತ್ರನಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಚಿಕ್ಕಮಗಳೂರಿನ ತನ್ನ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅವರು ಪೋಷಕರು, ಇಬ್ಬರು ಸಹೋದರಿಯರು ಮತ್ತು ಮೂವರು ಸಹೋದರರನ್ನು ಅಗಲಿದ್ದಾರೆ.